3 ಕಪ್ ಮೈದಾ
1 ಕಪ್ ನೀರು
ರುಚಿಗೆ ಉಪ್ಪು,
3 ಚಮಚಾ ಸಕ್ಕರೆ,
5 ಚಮಚಾ ಮಸಾಲೆ ಹುಡಿ,
1 ಚಮಚಾ ಎಳ್ಳು
ಕರಿಯಲು ತೆಂಗಿನೆಣ್ಣೆ
ನೀರಿಗೆ ಉಪ್ಪು ಸಕ್ಕರೆ ಹಾಕಿ ಕರಗಿಸಿ. ರುಚಿ ನೋಡಿಕೊಳ್ಳಿ, ಉಪ್ಪು ಹೆಚ್ಚಾಗಬಾರದು.
ಮಸಾಲಾ ಸಾಮಗ್ರಿ ಹಾಗೂ ಮೈದಾ ಸೇರಿಸಿ ಗಟ್ಟಿಯಾಗಿ ಕಲಸಿ.
ಅರ್ಧ ಗಂಟೆ ಬಿಟ್ಟು ಚಪಾತಿ ಲಟ್ಟಿಸಿ.
ತುಕ್ಕುಡಿ ಚಕ್ರದಲ್ಲಿ ಗೆರೆ ಎಳೆಯಿರಿ.
ಕಾದ ಎಣ್ಣೆಗೆ ಗೆರ ಹಾಕಿದ ಚಪಾತಿಗಳನ್ನು ಒಂದೊಂದಾಗಿ ಇಳಿಸಿ.
ಹೊಂಬಣ್ಣ ಬಂದಾಗ ತೆಗೆದು ಎಣ್ಣೆ ಬಸಿದು ಹೋಗಲು ತೂತಿನ ಪಾತ್ರೆಗೆ ಹಾಕಿಕೊಳ್ಳಿ.
ತಣಿದ ನಂತರ ಕೈಯಲ್ಲಿ ತುಕ್ಕುಡಿಗಳನ್ನು ಬಿಡಿಬಿಡಿಯಾಗಿಸಿ ಡಬ್ಬದಲ್ಲಿ ತುಂಬಿಸಿ.
ಮಕ್ಕಳು ರಜಾದಿನದಂದು ತಿಂಡಿಗಳ ಅಪೇಕ್ಷೆಯನ್ನು ಮುಂದಿಡುತ್ತಾರೆ. " ಅದು ಮಾಡು, ಇದು ಮಾಡು " ಎಂದು ಹಟ ಹಿಡಿಯುವ ಹೊತ್ತಿನಲ್ಲಿ ಇಂತಹ ತಿಂಡಿಗಳು ಮಾಡಲೂ ಸುಲಭ, ಮನೆಯಲ್ಲೇ ತಯಾರಿಸಿದ್ದು ಆರೋಗ್ಯಕ್ಕೂ ಹಿತ. ನಾನಂತೂ ಮಾಡಿ ಆಯ್ತು, ಸಂಜೆ ಹೊತ್ತಿಗೆ ಮನೆಯ ನೆನಪಿನೊಂದಿಗೆ ತಿನ್ನಲು ಮಗಳು ಮೂಡಬಿದ್ರಿಗೆ ಕೊಂಡು ಹೋಗಿಯೂ ಆಯ್ತು.
Posted via DraftCraft app
0 comments:
Post a Comment